ಮುಂಬಯಿ, ನ.06 (DaijiworldNews/HR): ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆ ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್ ಸುದ್ದಿವಾಹಿನಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ಮಧ್ಯಾಂತರ ಜಾಮೀನು ಕೋರಿ ಮಧ್ಯಾಂತರ ಜಾಮೀನು ಕೋರಿ ಮೆಟ್ಟಿಲೇರಿದ್ದು, ಅವರ ಜಾಮೀನು ಅರ್ಜಿ ವಿಚಾರಣೆ ಇಂದು ಬಾಂಬೆ ಹೈಕೋರ್ಟ್ನಲ್ಲಿ ನಡೆಯಲಿದೆ.

ಆತ್ಮಹತ್ಯೆಗೆ ಪ್ರಚೋದನೆ ಸಂಬಂಧ ಅರ್ನಬ್ ಗೋಸ್ವಾಮಿಯನ್ನು ಬುಧವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದು, ಬಳಿಕ ಮ್ಯಾಜಿಸ್ಟ್ರೇಟ್ ಕೋರ್ಟ್ ಅರ್ನಾಬ್ರನ್ನು ನ.18ರ ವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿತ್ತು, ಹಾಗಾಗಿ ಅರ್ನಾಬ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇನ್ನು ಅರ್ನಬ್ ಪರ ವಾದ ಮಂಡಿಸಿದ ವಕೀಲ ಅಬಾದ್ ಪೊಂಡಾ, ಅಲಿಬಾಗ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಾಪಸ್ ಪಡೆಯಲಾಗಿದೆ. ಜಾಮೀನು ಅರ್ಜಿ ವಿಚಾರಣೆ ಯಾವಾಗ ನಡೆಯಲಿದೆ ಎಂಬ ಬಗ್ಗೆ ಮ್ಯಾಜಿಸ್ಟ್ರೇಟ್ ಸ್ಪಷ್ಟನೆ ನೀಡಿಲ್ಲ ಎಂದು ತಿಳಿಸಿದ್ದಾರೆ.