ಬೀದರ್, ನ.06 (DaijiworldNews/PY): ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

"ನಾಲ್ಕು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಂಡ ಸಂದರ್ಭ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾದ ಯಾವುದೇ ಗುಣ ಲಕ್ಷಣಗಳು ಕಾಣಿಸಿಕೊಳ್ಳದಿದ್ದರೂ ಕೂಡಾ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಮನವಿ ಮಾಡಿದ್ದಾರೆ.
ಬಂಡೆಪ್ಪ ಖಾಶೆಂಪೂರ್ ಅವರು ಶಿರಾದಲ್ಲಿ ನಡೆದ ಉಪಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದು, ಈ ಹಿನ್ನೆಲೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಸಾಧ್ಯತೆ ಇದೆ.