ಬೆಂಗಳೂರು, ನ.14 (DaijiworldNews/PY): ತಮಿಳುನಾಡು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಉಸ್ತುವಾರಿಯಾಗಿ ನೇಮಕಗೊಂಡಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಮಾಜಿ ಐಪಿಎಸ್ ಅಣ್ಣಾಮಲೈ ಶುಭ ಹಾರೈಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಣ್ಣಾಮಲೈ ಅವರು, "ಸಿ.ಟಿ. ರವಿ ಅವರ ಬದ್ಧತೆ, ಕಠಿಣ ಪರಿಶ್ರಮ ಮತ್ತು ಸಾಬೀತಾದ ನಾಯಕತ್ವ ಕೌಶಲ್ಯದಿಂದ ತಮಿಳುನಾಡಿನಲ್ಲಿ ಕಮಲ ಅರಳುತ್ತದೆ" ಎಂದು ಹೇಳಿದ್ದಾರೆ.
ಸಿ.ಟಿ. ರವಿ ಅವರು ಇತ್ತೀಚೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಇದೀಗ ಅವರಿಗೆ ತಮಿಳುನಾಡು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಉಸ್ತುವಾರಿಯನ್ನು ನೀಡಲಾಗಿದೆ.