ಮುಂಬೈ, ನ. 14 (DaijiworldNews/MB) : ಕೊರೊನಾ ಕಾರಣದಿಂದಾಗಿ ಮಾರ್ಚ್ನಿಂದ ಈವರೆಗೂ ಮುಚ್ಚಿದ್ದ ಎಲ್ಲಾ ಧಾರ್ಮಿಕ ಕೇಂದ್ರಗಳನ್ನು ನ. 16ರಿಂದ ಮತ್ತೆ ತೆರೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಮುಖ್ಯಮಂತ್ರಿ ಉದ್ದವ್ ಠಾಕ್ರೆ
ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ.
ಹಾಗೆಯೇ ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ ಎಲ್ಲಾ ನಿಯಮಗಳನ್ನು ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುವವರು ಪಾಲಿಸಬೇಕು ಎಂದು ಸರ್ಕಾರ ತಿಳಿಸಿದೆ.
ದೇಶದಲ್ಲೇ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ ಪ್ರಸ್ತುತ 85,045 ಸಕ್ರಿಯ ಪ್ರಕರಣಗಳಿವೆ. ಒಟ್ಟು 17,40,461 ಕೊರೊನಾ ಪ್ರಕರಣಗಳು ದಾಖಲಾಗಿದ್ದು 16,09,607 ಮಂದಿ ಗುಣಮುಖರಾಗಿದ್ದಾರೆ. 45,809 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.