ಕೋಲಾರ,ನ.20 (DaijiworldNews/HR): ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿಲ್ಲ ಅಷ್ಟೆ ಆದರೆ ನಾನು ಇನ್ನೂ ಜೆಡಿಎಸ್ನಲ್ಲಿಯೇ ಇದ್ದೇನೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ನಾವು ಕುಟುಂಬ ಸ್ನೇಹಿತರಾಗಿದ್ದೇವೆ, ನನ್ನ ತಂದೆ ಮುಖ್ಯಮಂತ್ರಿಯಾಗಿದ್ದಾಗ ಶಿವಕುಮಾರ್ ಅವರ ಜತೆಯಾಗಿ ಕೆಲಸ ಮಾಡಿರುವ ಕಾರಣ ಅವರು ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದಾರೆ" ಎಂದರು.
ಇನ್ನು ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಬಸವರಾಜ ಹೊರಟ್ಟಿ, ಎಚ್.ವಿಶ್ವನಾಥ್ ಅವರಿಗೆ ಮಂತ್ರಿ ಸ್ಥಾನ ಕೊಡಬೇಕಿತ್ತು. ಅಧಿಕಾರ ಕೊಟ್ಟಿದ್ದರೆ ವಿಶ್ವನಾಥ್ ಜೆಡಿಎಸ್ನಲ್ಲೇ ಉಳಿಯುತ್ತಿದ್ದರು. ವಿಪಕ್ಷದವರು ದುರ್ಬಲವಾಗಿರುವುದರಿಂದ ಬಿಜೆಪಿ ಬಲವಾಗಿದೆ ಎಂದು ಹೇಳಿದ್ದಾರೆ.