ಬೆಂಗಳೂರು, ಡಿ.13 (DaijiworldNews/PY): ರವಿವಾರವೂ ಸಾರಿಗೆ ನಿಗಮಗಳ ನೌಕರರ ಮುಷ್ಕರ ಮುಂದುವರೆದಿದೆ.

ಸಾಂದರ್ಭಿಕ ಚಿತ್ರ
ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಗುರುವಾರದಿಂದ ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದು, ಪ್ರತಿಭಟನೆ ಅಂತ್ಯಗೊಳಿಸಲು ರಾಜ್ಯ ಸರ್ಕಾರ ನಡೆಸಿದ ಯಾವ ಪ್ರಯತ್ನಗಳೂ ಕೂಡಾ ಸಫಲವಾಗಿಲ್ಲ.
ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ನೌಕರರ ಮನವೊಲಿಸುವ ನಿಟ್ಟಿನಲ್ಲಿ ಸಾರಿಗೆ ನೌಕರರ ಸಂಘಟನೆಗಳ ಪ್ರತಿನಿಧಿಗಳ ಸಭೆ ಕರೆದಿದ್ದು, ರವಿವಾರ ಬೆಳಿಗ್ಗೆ ವಿಕಾಸಸೌಧದಲ್ಲಿ ಸಭೆ ನಡೆಯಲಿದೆ.
ಈ ಬಗ್ಗೆ ತಮಗೆ ಅಧಿಕೃತವಾದ ಆಹ್ವಾನ ಬಂದಿಲ್ಲ ಎಂದು ಮುಷ್ಕರದ ನೇತೃತ್ವ ವಹಿಸಿರುವ ಸಾರಿಗೆ ನೌಕರರ ಕೂಟದ ಮುಖಂಡರು ಹೇಳಿದ್ದಾರೆ.