ನವದೆಹಲಿ, ಡಿ.15 (DaijiworldNews/HR): ರೈತರ ಪ್ರತಿಭಟನೆಗೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಬೆಂಬಲ ನೀಡಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, "ಕೇಂದ್ರ ಸರ್ಕಾರವು ರೈತರಿಗೆ ವಿರುದ್ಧವಾಗಿ ಏನೂ ಮಾಡಿಲ್ಲ, ರೈತರಿಗೆ ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಹಕ್ಕಿದೆ. ಅಣ್ಣಾ ಹಜಾರೆಯವರು ರೈತರ ಪ್ರತಿಭಟನೆ ಬೆಂಬಲಿಸಬಹುದು ಎಂದು ನಾನು ಭಾವಿಸುವುದಿಲ್ಲ" ಎಂದರು.
ಇನ್ನು "ರೈತರಿಗೆ ಖಂಡಿತವಾಗಿಯೂ ನ್ಯಾಯ ಸಿಗಲಿದೆ. ಈ ವಿಷಯವನ್ನು ರಾಜಕೀಯಗೊಳಿಸಬಾರದು. ಕೆಲವರು ರೈತರನ್ನು ಹಾದಿ ತಪ್ಪಿಸುತ್ತಿದ್ದಾರೆ. ರೈತರು ಮೂರು ಕೃಷಿ ಕಾಯ್ದೆಗಳನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು" ಹೇಳಿದ್ದಾರೆ.