ಬೆಂಗಳೂರು, ಡಿ.22 (DaijiworldNews/HR): ರಾಜ್ಯದಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ಆರಂಭವಾಗಿದ್ದು, ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ ಐದು ಗಂಟೆಯವರೆಗೆ ಮತದಾನ ನಡೆಯಲಿದೆ.

ಕೊರೊನಾ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಮತದಾನ ನಡೆಸಲಾಗುತ್ತಿದ್ದು, ಚುನಾವಣೆಗೆ ಸಂಬಂಧಿಸಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಿಆರ್ಪಿಸಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಾಜ್ಯದ 117 ತಾಲೂಕುಗಳ 3,019 ಗ್ರಾಮಪಂಚಾಯಿತಿಗಳಲ್ಲಿನ 43,238 ಸ್ಥಾನಗಳಿಗೆ ಇಂದು ಚುನಾವಣೆಯು ಕೊರೊನಾ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ನಡೆಯುತ್ತಿದೆ.