ಮಂಗಳೂರು, ಜ 04 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಸೋಮವಾರ 16 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 32,994 ಕ್ಕೆ ಏರಿಕೆಯಾಗಿದೆ. ಈ ಪೈಕಿ 367 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಒಟ್ಟು 4,96,620 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಆ ಪೈಕಿ 4,63,626 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ಜಿಲ್ಲೆಯಲ್ಲಿ ಸೋಮವಾರ 27 ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 31,895ಕ್ಕೆ ತಲುಪಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಜಿಲ್ಲೆಯಲ್ಲಿ ಸೋಮವಾರ ಆರು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,113ಕ್ಕೆ ಏರಿಕೆಯಾಗಿದೆ. ಈ ಪೈಕಿ 90 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇಲ್ಲಿಯವರೆಗೆ 2,93,866 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,70,753 ಮಾದರಿಗಳು ನೆಗೆಟಿವ್ ಆಗಿದೆ. ಸೋಮವಾರ 14 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 22,834ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 189 ಸಾವುಗಳು ಸಂಭವಿಸಿವೆ.