ಶಿಮ್ಲಾ, ಜ.05 (DaijiworldNews/HR): ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿರುವ ಪಾಂಗ್ ಡ್ಯಾಮ್ನ ಹತ್ತಿರ 1700ಕ್ಕೂ ಅಧಿಕ ಪಕ್ಷಿಗಳು ಮೃತಪಟ್ಟಿರುವುದರಿಂದ ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಬ್ಬಾತು, ಗಾವಿಲಾ, ರೀವರ್ ಟೇಲ್ ಸೇರಿದಂತೆ ವಿವಿಧ ಪ್ರಬೇಧಕ್ಕೆ ಸೇರಿದ ಪಕ್ಷಿಗಳು ಹಕ್ಕಿಜ್ವರದಿಂದ ಸಾವನ್ನಪ್ಪಿವೆ ಎಂಬುದು ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿರುವುದಾಗಿ ಎಂದು ಕಾಂಗ್ರಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇನ್ನು ನದಿ ಪಾತ್ರದ ಸುಮಾರು 10 ಕಿ,ಮೀಟರ್ ವ್ಯಾಪ್ತಿಯಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಬಂದ್ ಮಾಡಲಾಗಿದ್ದು, ಹಾಗೇ ಕೋಳಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.