ನವದೆಹಲಿ,ಜ.05 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ಖಂಡಿಸಿ ರೈತರು ನಡೇಸುತ್ತಿರುವ ಪ್ರತಿಭಟನೆ 41 ದಿನಕ್ಕೆ ಕಾಲಿಟ್ಟಿದ್ದು, ಈ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ವಿರೋಧ ಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, "ಕೇಂದ್ರ ಸರ್ಕಾರದ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 50 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದು ಕಾಂಗ್ರೆಸ್ನ ಎಲ್ಲ ಮುಖಂಡರು ಸೇರಿ ಅವರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ನೀಡುತ್ತಿದ್ದೇವೆ" ಎಂದರು.
ಇನ್ನು ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಪರಿಹಾರ ನೀಡುವುದರ ಜೊತೆಗೆ ಸರ್ಕಾರಿ ಉದ್ಯೋಗ ನೀಡುವಂತೆ ಹರಿಯಾಣ ಸರ್ಕಾರಕ್ಕೆ ಭೂಪಿಂದರ್ ಸಿಂಗ್ ಹೂಡಾ ಅವರು ಒತ್ತಾಯಿಸಿದ್ದಾರೆ.