ಕಲಬುರಗಿ, ಜ.05 (DaijiworldNews/HR): ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ಮುಖಂಡ, ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ ಮೋತಕಪಲ್ಲಿ(88) ನಿಧನರಾಗಿದ್ದಾರೆ.

ಬಸವಂತರೆಡ್ಡಿ ಸೇಡಂ ತಾಲೂಕಿನ ಮೋತಕಪಲ್ಲಿ ಗ್ರಾಮದವರಾದ ಬಸವಂತರೆಡ್ಡಿ ಪಾಟೀಲ ಸೇಡಂ ವಿಧಾನಸಭಾ ಕ್ಷೇತ್ರಕ್ಕೆ ಎರಡು ಬಾರಿ ಶಾಸಕರಾಗಿದ್ದು, 1978 ರಲ್ಲಿ ಜನತಾ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿದ್ದರು.
ಇನ್ನು 1988ರಲ್ಲಿ ಮುಧೋಳ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು, ಬಳಿಕ 1989ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೇಡಂನ ಶಾಸಕರಾಗಿ ಆಯ್ಕೆಗೊಂಡಿದರು.
ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ, ಆರು ಜನ ಮೊಮ್ಮಕ್ಕಳು ಇದ್ದು, ಮೋತಕಪಲ್ಲಿ ಗ್ರಾಮದ ಸ್ವಂತ ಜಮೀನಿನಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರೆವೆರಲಿದೆ ಎಂದು ಅವರು ಕುಟುಂಬಸ್ಥರು ತಿಳಿಸಿದ್ದಾರೆ.