ಉಡುಪಿ, ಜ 05 (DaijiworldNews/SM): ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿಯ ನದಿ ತೀರದ ರಸ್ತೆಯಲ್ಲಿ ಸಂಚರಿಸುತಿದ್ದ ಕಾರು ಹಠಾತ್ತನೆ ನಂದಿನಿ ನದಿಗೆ ಬಿದ್ದ ಘಟನೆ ನಡೆದಿದ್ದು, ಕಾರಿನಲ್ಲಿದ್ದವರು ಪವಾಡ ಸದೃಶ್ಯ ಪಾರಾಗಿದ್ದಾರೆ.


ಸ್ಥಳೀಯ ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಮತ್ತು ಆತನ ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್" ಎಂಬ ಸ್ಥಳಕ್ಕೆ ತೆರಲಿ ವಾಪಸ್ ಬರುವ ವೇಳೆ ಹಠಾತ್ತನೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಪಕ್ಕದ ನಂದಿನಿ ನದಿಗೆ ಬಿದ್ದಿದೆ. ಕಾರು ಮುಳುಗುತ್ತಿರುವಾಗಲೆ ಅಶ್ರಫ್ ಮತ್ತು ಅವರ ಸ್ನೇಹಿತ ಕಾರ್ ನಿಂದ ಹೊರಬಂದು ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಾಯದಿಂದ ಕ್ರೇನ್ ಮೂಲಕ ಕಾರನ್ನು ನದಿಯಿಂದ ಮೇಲೆತ್ತಿದ್ದಾರೆ.