ಬೆಂಗಳೂರು,ಜ.11 (DaijiworldNews/HR): ಈ ಸರ್ಕಾರ ರಚನೆಗೆ ನಾನೇ ಪ್ರಮುಖ ಕಾರಣವಾಗಿದ್ದು, ನನ್ನನ್ನು ಯಾವುದೇ ಕಾರಣಕ್ಕೂ ಕೈ ಬಿಡಲ್ಲ. ನನ್ನನ್ನು ಸರ್ಕಾರದಿಂದ ಕೈಬಿಡುವಷ್ಟು ಧೈರ್ಯ ಯಾರಿಗಿದೆ ಸ್ವಾಮಿ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದ್ದಾರೆ.

ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹೈಕಮಾಂಡ್ ಮಾಡಿರುವ ತೀರ್ಮಾನದ ಬಗ್ಗೆ ಮಾಹಿತಿ ಇಲ್ಲ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ನನ್ನನ್ನು ಸಂಪುಟದಿಂದ ಕೈ ಬಿಡುವುದಿಲ್ಲ ಎಂದು ನಂಬಿಕೆಯಿದೆ" ಎಂದರು.
ಇನ್ನು ಯಡಿಯೂರಪ್ಪನವರು ಈ ಹಿಂದೆ ನನಗೆ ಮಾತು ಕೊಟ್ಟಿದ್ದಾರೆ. ಅವರು ಕೊಟ್ಟ ಮಾತಿನಂತೆ ಉಳಿಸಿಕೊಳ್ಳುವ ನಂಬಿಕೆಯಿದೆ. ಈ ಬಗ್ಗೆ ಮುಖ್ಯಮಂತ್ರಿ ಭೇಟಿ ಮಾಡಿ ಚರ್ಚೆ ಮಾಡುತ್ತೇನೆ. ಹೈಕಮಾಂಡ್ ಏನು ಹೇಳಿದೆ ಎಂಬುದನ್ನು ತಿಳಿದುಕೊಳ್ಳುತ್ತೇನೆ" ಎಂದು ಹೇಳಿದ್ದಾರೆ.