ಮಂಗಳೂರು, ಜ 14 (DaijiworldNews/SM): ಅಪಘಾತದಲ್ಲಿ ಗಾಯಗೊಂಡ ಯುವತಿಗೆ ನೆರವಾಗುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ. ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಮಾನವೀಯತೆ ಮೆರೆದಿದ್ದಾರೆ.

ಮಂಗಳೂರು ಹೊರ ವಲಯದ ಗುರುಪುರ ಸೇತುವೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಪಲ್ಟಿಯಾಗಿತ್ತು. ಈ ಸಂದರ್ಭದಲ್ಲಿ ದ್ವಿಚಕ್ರವಾಹನದಲ್ಲಿದ್ದ ಯುವತಿ ಗಾಯಗೊಂಡಿದ್ದಾಳೆ. ಆ ಸಂದರ್ಭದಲ್ಲಿ ಅದೇ ರಸ್ತೆ ಮೂಲಕ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಯುವತಿಯ ನೆರವಿಗೆ ಧಾವಿಸಿದ್ದಾರೆ. ಮಾನವೀಯ ನೆಲೆಯಲ್ಲಿ ತನ್ನ ಕಾರು ನಿಲ್ಲಿಸಿ ಅಪಘಾತ ನಡೆದ ಸ್ಥಳಕ್ಕೆ ತೆರಳಿ ಯುವತಿಯನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿ ಬಳಿಕ ಮನೆಗೆ ಸೇರಿಸುವ ನಿಟ್ಟಿನಲ್ಲಿ ಸಂಸದರು ನೆರವು ನೀಡಿದ್ದಾರೆ.
ಸಂಸದರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಶ್ಲಾಘನೆ ವ್ಯಕ್ತವಾಗಿದೆ.