ನವದೆಹಲಿ, ಜ.20 (DaijiworldNews/PY): ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ವಿವಿಧ ರೈತ ಸಂಘಟನೆಗಳು ಜ.26ರಂದು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್ಯಾಲಿಗೆ ತಡೆಯಾಜ್ಞೆ ನೀಡಬೇಕೆಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.

ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಹಾಗೂ ನ್ಯಾಯಮೂರ್ತಿಗಳಾದ ಎಸ್.ಬೋಪಣ್ಣ ಹಾಗೂ ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠವು, "ಜ.26ರಂದು ರೈತ ಸಂಘಟನೆಗಳು ನಡೆಸಿಲು ಉದ್ದೇಶಿಸರುವ ಟ್ರ್ಯಾಕ್ಟರ್ ರ್ಯಾಲಿಯ ವಿಚಾರವನ್ನು ಪೊಲೀಸರು ಇತ್ಯರ್ಥಗೊಳಿಸಬೇಕು" ಎಂದು ತಿಳಿಸಿತ್ತು. ಈ ಹಿನ್ನೆಲೆ ಟ್ರ್ಯಾಕ್ಟರ್ ರ್ಯಾಲಿಗೆ ತಡೆಯಾಜ್ಞೆ ನೀಡಬೇಕೆಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.
ನ್ಯಾಯಪೀಠವು ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆ ನಡೆಸಿದ್ದು, "ನಾವು ಟ್ರ್ಯಾಕ್ಟರ್ ರ್ಯಾಲಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದೇ ರೀತಿಯಾದ ನಿರ್ದೇಶನ ನೀಡುದಿಲ್ಲ. ಈ ವಿಚಾರ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ವಿಷಯ. ಈ ಅರ್ಜಿಯನ್ನು ಹಿಂಪಡೆಯಲು ಅವಕಾಶ ಕಲ್ಪಿಸುತ್ತೇವೆ. ಈ ಬಗ್ಗೆ ಇತ್ಯರ್ಥಗೊಳಿಸಲು ನಿಮಗೆ ಅಧಿಕಾರವಿದೆ" ಎಂದು ಹೇಳಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಮುಂದುವರೆದಿದೆ.