ನವದೆಹಲಿ, ಫೆ.01 (DaijiworldNews/HR): "ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2021-22ನೇನೇ ಸಾಲಿನ ಬಜೆಟ್ ಎಲ್ಲರನ್ನೂ ಒಳಗೊಳ್ಳುವ ಜೊತೆಗೆ ಸ್ವಾವಲಂಬಿ ಭಾರತಕ್ಕೆ ಪೂರಕವಾಗಿದೆ" ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, "ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆಶಯಕ್ಕೆ ಈ ಬಾರಿಯ ಬಜೆಟ್ ಮತ್ತಷ್ಟು ಬಲ ತುಂಬಿದ್ದು, ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ನೆರವಾಗಲಿದೆ" ಎಂದರು.
ಇನ್ನು ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅತ್ಯುತ್ತಮ ಬಜೆಟ್ ಮಂಡಿಸಿದ್ದು, ಕೊರೊನಾ ವಿರುದ್ಧದ ಲಸಿಕೆಗಾಗಿ 35,000 ಕೋಟಿ ತೆಗೆದಿರಿಸಿರುವುದು ಶ್ಲಾಘನೀಯವಾಗಿದ್ದು, ಇದು ಭಾರತನ್ನು ಕೊರೊನಾ ಮುಕ್ತವನ್ನಾಗಿ ಮಾಡುವ ಪ್ರಧಾನಿಯ ಬದ್ಧತೆಯನ್ನು ತೋರಿಸುತ್ತದೆ" ಎಂದು ಹೇಳಿದ್ದಾರೆ.