ನವದೆಹಲಿ, ಫೆ. ೦೧ (DaijiworldNews/SM): ಕೇಂದ್ರದ 2021ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, ಕೊರೋನಾ ಸಾಂಕ್ರಾಮಿಕ ಬಿಕ್ಕಟ್ಟಿನ ನಡುವೆ ಮಂಡಿಸಲಾಗಿರುವ ಬಜೆಟ್ ಭಾರತೀಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಜೆಟ್ ಮಂಡನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಆರ್ಥಿಕ ಬೆಳವಣಿಗಾಗಿ ಹೊಸ ಅವಕಾಶಗಳ ವಿಸ್ತರಣೆಯಾಗಿದೆ. ಈ ಬಾರಿ ಮಂಡಿಸಲಾಗಿರುವ ಬಜೆಟ್ ಮೂಲಕ ಯುವ ಜನಾಂಗಕ್ಕೆ ಉದ್ಯೋಗ ಸೃಷ್ಟಿಯಾಗಲಿದ್ದು ಹೊಸ ಸುಧಾರಣೆಗೆ ನಾಂದಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹೂಡಿಕೆ, ಉದ್ಯಮ ಮತ್ತು ಮೂಲ ಸೌಕರ್ಯ ವಲಯಗಳಲ್ಲಿ ಬಜೆಟ್ ಹಲವು ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ. ಒಂದು ಉತ್ತಮವಾದಂತಹ ಬಜೆಟ್ ಸಿದ್ದಪಡಿಸಿದ್ರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಅವರ ತಂಡಕ್ಕೆ ಅಭಿನಂದನೆಗಳೆಂದು ಪ್ರಧಾನಿ ಮೋದಿ ಹೇಳಿದರು.
ಜನಸಾಮಾನ್ಯರಿಗೆ ತೆರಿಗೆ ಹೊರೆಯಾಗದಂತೆ ಹತ್ತು ಹಲವು ರೀತಿಯಲ್ಲಿ ಪ್ರಯತ್ನಿಸಲಾಗಿದೆ. ರೈತರ ಆದಾಯ ಏರಿಕೆಯಾ ದೃಷ್ಟಿಯಿಂದಲೂ ಕ್ರಮ ವಹಿಸಲಾಗಿದೆ. ಈ ಮೂಲಕ ರೈತರು ಆರಾಮವಾಗಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.