ಬೆಂಗಳೂರು, ಫೆ. ೦೧ (DaijiworldNews/SM): ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೂ ಒತ್ತು ನೀಡಲಾಗಿದ್ದು, ಶಿಕ್ಷಣ ಸುಧಾರಣೆಗೆ ಪೂರಕವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನೂತನ ಶಿಕ್ಷಣ ನೀತಿ ಜಾರಿಗೆ ಅವಕಾಶ ಕಲ್ಪಿಸಲಾಗಿದ್ದು, 39 ವರ್ಷಗಳ ನಂತರ ಶಿಕ್ಷಣ ಕ್ಷೇತ್ರ ಸುಧಾರಣೆಗೆ ಕಾರಣವಾಗಿದೆ. ಈ ಆಯವ್ಯಯದಲ್ಲಿ ನೂತನ ಶಿಕ್ಷಣ ನೀತಿ ಪರಿಣಾಮಕಾರಿಯಾಗಿ ಜಾರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ ಎಂದರು.