ನವದೆಹಲಿ,ಫೆ.02 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಎರಡು ತಿಂಗಳಿಂದ ನಡೆಸುತ್ತಿರುವ ಪ್ರತಿಭಟನೆ ನಿಲ್ಲಿಸಲು ರೈತರು ತಯಾರಿಲ್ಲದ ಹಿನ್ನಲೆಯಲ್ಲಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವ ಪ್ರಸ್ತಾಪವನ್ನು ಸರ್ಕಾರ ರೈತರ ಮುಂದಿಟ್ಟಿದೆ.

ಈ ಕುರಿತು ಬಜೆಟ್ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, "ರೈತರ ಪ್ರತಿಭಟನೆಗೆ ಚರ್ಚೆ ಒಂದೇ ಪರಿಹಾರ, ಸರ್ಕಾರ ಚರ್ಚೆಗೆ ಸಿದ್ಧವಿದೆ. ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನವೇ ಪ್ರಧಾನಿ ಚರ್ಚೆಗೆ ಆಹ್ವಾನ ನೀಡಿದ್ದಾರೆ. ಈಗಲೂ ಅವರು ಚರ್ಚೆಗೆ ಬರಬಹುದು. ರೈತರ ಯಾವುದೇ ಪ್ರಶ್ನೆಗೆ ಉತ್ತರಿಸುವ ಅವಕಾಶವನ್ನು ಕೃಷಿ ಸಚಿವರು ಎಂದೂ ನಿರಾಕರಿಸಿಲ್ಲ" ಎಂದರು.
ಇನ್ನು "ತಮ್ಮ ರಾಜಕೀಯ ಲಾಭಕ್ಕಾಗಿ ಕೆಲವರು ರೈತರು ಪ್ರತಿಭಟನೆಯನ್ನು ಇನ್ನಷ್ಟು ಹೆಚ್ಚು ಮಾಡುವಂತೆ ಮಾಡಿದ್ದಾರೆ. ರೈತ ಸಂಘಗಳು ಇದನ್ನು ಅರ್ಥಮಾಡಿಕೊಳ್ಳುತ್ತವೆ ಎಂದು ಆಶಿಸುತ್ತೇನೆ ಎಂದು ಕೃಷಿ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಹೇಳಿದ್ದು, ಮಾತುಕತೆಗೆ ನಾವು ಈಗಲೂ ಸಿದ್ಧವಿದ್ದೇವೆ. ಕುಳಿತು ಮಾತನಾಡಿದರೆ ಸಮಸ್ಯೆಗೆ ಪರಿಹಾರ ಸಿಗಲಿದೆ" ಎಂದು ಅವರು ಹೇಳಿದ್ದಾರೆ.