ಅಹಮದಾಬಾದ್,ಫೆ.02 (DaijiworldNews/HR): ಗುಜರಾತ್ನ ವಡೋದರಾದಲ್ಲಿ ಕೊರೊನಾ ಲಸಿಕೆ ಪಡೆದ ಎರಡೇ ಗಂಟೆಯಲ್ಲಿ 30 ವರ್ಷದ ಪೌರ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಸಾವಿಗೆ ನಿಖರವಾದ ಕಾರಣ ತಿಳಿಯುವುದಕ್ಕಾಗಿ ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ಆದೇಶಿಸಿದ್ದಾರೆ.

ಸಾಂಧರ್ಭಿಕ ಚಿತ್ರ
ಪೌರ ಕಾರ್ಮಿಕನ ಹಠಾತ್ ಸಾವಿಗೆ ಕೊರೊನಾ ಲಸಿಕೆಯೇ ಕಾರಣವಿರಬಹುದು ಎಂದು ಮೃತರ ಕುಟುಂಬ ಸದಸ್ಯರು ಶಂಕಿಸಿದ್ದಾರೆ.
ಆದರೆ ಈ ಅನುಮಾನವನ್ನು ಅಧಿಕಾರಿಗಳು ನಿರಾಕರಿಸಿದ್ದು, "2016ರಿಂದ ಹೃದಯ ಸಂಬಂಧಿ ಕಾಯಿಲೆ ಹೊಂದಿದ್ದರಿಂದ ಮತ್ತು ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳದ ಕಾರಣ ಹೃದಯಾಘಾತದಿಂದ ಮೃತಪಟ್ಟಿರಬಹುದು" ಎಂದು ತಿಳಿಸಿದ್ದಾರೆ.
ಇನ್ನು ಮೃತ ಪೌರಕಾರ್ಮಿಕ ಜಿಗ್ನೇಶ್ ಸೋಲಂಕಿ ವಡೋದರಾ ಮುನ್ಸಿಪಲ್ ಕಾರ್ಪೊರೇಶನ್ನಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.