ತುಮಕೂರು, ಫೆ.02 (DaijiworldNews/HR): ದಾಸ್ತಾನು ಮಾಡಿದ್ದ ಜಿಲೆಟಿನ್, ಗನ್ಪೌಡರ್ ಸ್ಫೋಟಗೊಂಡು ಮನೆ ಧ್ವಂಸಗೊಂಡಿದ್ದು, ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ತುಮಕೂರು ತಾಲ್ಲೂಕಿನ ಮಸ್ಕಲ್ ಗ್ರಾಮದ ಮನೆಯೊಂದರಲ್ಲಿ ನಡೆದಿದೆ.

ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಿಕಾಂತ್ ಎಂಬುವರ ಮನೆಯಲ್ಲಿ ಈ ಸ್ಫೋಟ ನಡೆದಿದೆ ಎನ್ನಲಾಗಿದೆ.
ಇನ್ನು ಆ ಮನೆಯಲ್ಲಿದ್ದ ಸುವರ್ಣಮ್ಮ ಎಂಬುವರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಫೋಟದ ನಂತರ ಶೋಧ ನಡೆಸಿದ್ದು, ಮನೆಯಲ್ಲಿ ನಾಡ ಬಂದೂಕು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.