ಚಂಡೀಗಢ, ಫೆ.02 (DaijiworldNews/PY): ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆಯ ವಿಚಾರದ ಬಗ್ಗೆ ಚರ್ಚೆ ನಡೆಸಲು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಅವರು ಕರೆದಿರುವ ಸರ್ವಪಕ್ಷಗಳ ಸಭೆಗೆ ಬಿಜೆಪಿ ಗೈರಾಗಿದೆ.

ಕೇಂದ್ರದ ನೂತನ ಮೂರು ಕೃಷಿ ಕಾಯ್ದೆಗಳ ವಿರುದ್ದ ದೆಹಲಿಯ ಸಿಂಘು ಗಡಿ ಸೇರಿದಂತೆ ಘಾಜಿಪುರ್ ಹಾಗೂ ಟಿಕ್ರಿ ಗಡಿ ಪ್ರದೇಶಗಳಲ್ಲಿ ಕಳೆದ ಎರಡು ತಿಂಗಳುಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರದ ಬಗ್ಗೆ ಚರ್ಚೆ ನಡೆಸಲು ಸಭೆ ಕರೆಯಲಾಗಿತ್ತು.