ಉತ್ತರಪ್ರದೇಶ, ಫೆ.02 (DaijiworldNews/PY): "ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸಿದ ಆರೋಪದಡಿ ಯುವಕನೋರ್ವನನ್ನು ಬಂಧಿಸಲಾಗಿದೆ" ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಬಂಧಿತನನ್ನು ಜಿತೇಂದ್ರ ತಿವಾರಿ ಅಲಿಯಾಸ್ ಜೀತು ಎಂದು ಗುರುತಿಸಲಾಗಿದೆ.
"ಪ್ರಧಾನಿ ಮೋದಿ ಅವರ ಸಹೋದರನ ಹೆಸರಿನಲ್ಲಿ ಜಿತೇಂದ್ರ ತಿವಾರಿ ಅಲಿಯಾಸ್ ಜೀತು ಎಂಬಾತ ಜನರಿಗೆ ವಂಚಿಸುತ್ತಿದ್ದ ಎನ್ನುವ ಮಾಹಿತಿಯನ್ನು ಪ್ರಧಾನ ಮಂತ್ರಿ ಕಚೇರಿ ತಿಳಿಸಿತ್ತು. ಈ ಮಾಹಿತಿಯ ಮೇರೆಗೆ ಆರೋಪಿಯನ್ನು ವಿಕಾಸ್ ಭವನದ ಬಳಿ ಸೋಮವಾರ ಬಂಧಿಸಲಾಗಿದೆ" ಎಂದು ನಗರ ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ಭುಪೇಂದ್ರ ಸಿಂಗ್ ಹೇಳಿದ್ದಾರೆ.
"ಜ.4ರಂದು ಗುಜರಾತ್ನ ಮಾಧವ್ಪುರದಲ್ಲಿ ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಸ್ತಾಪಿಸಿದ್ದ ಕಾರ್ಯಕ್ರಮದ ಪೋಸ್ಟರ್ ಅನ್ನು ಜಿತೇಂದ್ರ ತಿವಾರಿ ತನ್ನ ಕಾರಿನಲ್ಲಿ ಅಂಟಿಸಿಕೊಂಡಿದ್ದ" ಎಂದು ಪೊಲೀಸರು ತಿಳಿಸಿದ್ದಾರೆ.