ನವದೆಹಲಿ, ಫೆ.19 (DaijiworldNews/HR): ಧೀರ್ಘ ಕಾಲದ ಅನಾರೋಗ್ಯದ ನಂತರ ಬುಧವಾರ ಗೋವಾದಲ್ಲಿ ನಿಧನರಾದ ಕಾಂಗ್ರೆಸ್ ಪಕ್ಷದ ಮುಖಂಡ ಕ್ಯಾಪ್ಟನ್ ಸತೀಶ್ ಶರ್ಮಾ(73 ) ಅವರ ಪಾರ್ಥಿವ ಶರೀರಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೆಗಲು ನೀಡಿದ್ದಾರೆ.

ಸತೀಶ್ ಶರ್ಮಾ ಅವರೌ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಗೋವಾದಲ್ಲಿ ಬುಧವಾರ ರಾತ್ರಿ 8-16 ರ ಸುಮಾರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಆಪ್ತರಾಗಿದ್ದ ಕ್ಯಾಪ್ಟನ್ ಸತೀಶ್ ಶರ್ಮಾ, ಅಕ್ಟೋಬರ್ 11, 1947ರಂದು ಆಂಧ್ರಪ್ರದೇಶದ ಸಿಕಂದಾರಾಬಾದ್ನಲ್ಲಿ ಜನಿಸಿದ್ದು, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರಾಗಿ ನರಸಿಂಹ ರಾವ್ ಸರ್ಕಾರದಲ್ಲಿ 1993 ರಿಂದ 1996ರವರೆಗೆ ಸೇವೆ ಸಲ್ಲಿಸಿದ್ದಾರೆ.