ತಿರುವನಂತಪುರ, ಫೆ.19 (DaijiworldNews/MB) : ಬ್ರಿಟನ್, ದಕ್ಷಿಣ ಆಫ್ರಿಕಾ ಹಾಗೂ ಬ್ರೆಜಿಲ್ನಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ರೂಪಾಂತರ ತಳಿಗಳ ವಿರುದ್ಧ ಕೋವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿಯಾಗುವ ಸಾಧ್ಯತೆಯಿದೆ ಎಂದು ಕ್ಲಿನಿಕಲ್ ಟ್ರಯಲ್ನ ಮಧ್ಯಂತರ ವರದಿಯಲ್ಲಿ ತಿಳಿದುಬಂದಿರುವುದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಪ್ರಧಾನ ನಿರ್ದೇಶಕ ಡಾ.ಬಲರಾಂ ಭಾರ್ಗವ್ ತಿಳಿಸಿದರು.

ಕೇರಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ವೆಬಿನಾರ್ ಉದ್ದೇಶಿಸಿ ಮಾತನಾಡಿದ ಅವರು, ''ಈಗಾಗಲೇ ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ನಲ್ಲಿ ಪತ್ತೆಯಾದ ಕೊರೊನಾ ವೈರಸ್ನ ರೂಪಾಂತರ ತಳಿಗಳ ಮಾದರಿಯನ್ನು ಪ್ರಯಾಣಿಕರಿಂದ ಸಂಗ್ರಹಿಸಲಾಗಿದೆ. ಕೋವ್ಯಾಕ್ಸಿನ್ ಬಿಬಿ152 ಲಸಿಕೆಯ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲಾಗಿದೆ'' ಎಂದು ಮಾಹಿತಿ ನೀಡಿದರು.
''ಮೂರನೇ ಹಂತದ ಟ್ರಯಲ್ನಲ್ಲಿ 25,800 ಸ್ವಯಂಸೇವಕರು ಭಾಗಿಯಾಗಿದ್ದರು. ಅವರಿಗೆ ಲಸಿಕೆಯ ಎರಡು ಡೋಸ್ಗಳನ್ನು ನೀಡಲಾಗಿತ್ತು'' ಎಂದು ಹೇಳಿದರು.