ಕೋಲ್ಕತ್ತಾ, ಫೆ.19 (DaijiworldNews/PY): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

"ಅಮಿತ್ ಶಾ ಅವರು ಫೆ.22ರಂದು ಬೆಳಗ್ಗೆ 10 ಗಂಟೆಗೆ ಖುದ್ದಾಗಿ ಅಥವಾ ವಕೀಲರ ಮುಖಾಂತರ ನ್ಯಾಯಾಲಯಕ್ಕೆ ಹಾಜರಾಗಬೇಕು" ಎಂದು ಬಿಧಾರ್ನಗರದಲ್ಲಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.
"ಅಮಿತ್ ಶಾ ಅವರು ಐಪಿಎಸ್ ಸೆಕ್ಷನ್ ಅಡಿಯಲ್ಲಿ ದಾಖಲಾಗಿರುವ ಮಾನಹಾನಿ ಪ್ರಕರಣಕ್ಕೆ ಸಂಬಧಿಸಿದಂತೆ ಉತ್ತರಿಸಲು ಹಾಜರಾಗಬೇಕು" ಎಂದಿದ್ದಾರೆ.
"ಕೋಲ್ಕತ್ತಾದ ಮಾಯೊ ರಸ್ತೆಯಲ್ಲಿ 2018ರ ಆಗಸ್ಟ್ 11ರಂದು ನಡೆದ ಬಿಜೆಪಿ ಸಮಾವೇಶದಲ್ಲಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಅಮಿತ್ ಶಾ ಅವರು ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು" ಎಂದು ವಕೀಲ ಸಂಜಯ್ ಬಸು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.