ಬೆಂಗಳೂರು, ಫೆ. 19 (DaijiworldNews/SM): ಶುಕ್ರವಾರ ಮುಜರಾಯಿ ಸಚಿವ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರ ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.



ಅದೃಷ್ಟವಶಾತ್, ಕಾರಿನಲ್ಲಿದ್ದ ಸಚಿವರು ಮತ್ತು ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಪೆಟ್ರೋಲ್ ಪಂಪ್ನಲ್ಲಿ ಇಂಧನ ತುಂಬಿಸಿ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಾಗ ಕೆಎಸ್ಆರ್ಟಿಸಿ ಬಸ್ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.