ನವದೆಹಲಿ, ಫೆ.20 (DaijiworldNews/PY): ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾದ 200 ಮಂದಿಯ ಭಾವಚಿತ್ರಗಳನ್ನು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಪ್ರಾತಿನಿಧಿಕ ಚಿತ್ರ
ಜ.26ರಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿಗೆ ಸಂಬಂಧಪಟ್ಟಂತೆ ಎಲ್ಲಾ ವಿಡಿಯೋಗಳನ್ನು ಹಾಗೂ ಚಿತ್ರಗಳನ್ನು ಪರಿಶೀಲನೆ ಮಾಡಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಬಿಡುಗಡೆ ಮಾಡಿರುವ ಭಾವಚಿತ್ರದಲ್ಲಿರುವವರ ಗುರುತು ಪತ್ತೆ ಮಾಡುವ ಕಾರ್ಯ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಹೇಳಿದ್ದಾರೆ.
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ದ ನಡೆಸಿದ ಟ್ರ್ಯಾಕ್ಟರ್ ರ್ಯಾಲಿಯ ಸಂದರ್ಭ ರೈತರು ಹಾಗೂ ಪೊಲೀಸರ ಮಧ್ಯೆ ಸಂಘರ್ಷ ನಡೆದಿತ್ತು. ಹಲವು ಮಂದಿ ಕೆಂಪುಕೋಟೆಯನ್ನು ಪ್ರವೇಶ ಮಾಡಿ ಧಾರ್ಮಿ ಧ್ವಜ ಹಾರಿಸಿದ್ದು, ಇದು ವಿವಾದಕ್ಕೆ ಕಾರಣವಾಗಿತ್ತು.