ಮೈಸೂರು, ಫೆ.27 (DaijiworldNews/HR): "ಮೇಯರ್ ಚುನಾವಣೆಯಲ್ಲಿ ಮತದಾನಕ್ಕೆ ಹಾಜರಾಗದೇ ಇದ್ದ ಶಾಸಕ ಜಿ.ಟಿ.ದೇವೇಗೌಡ ಹಾಗೂ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು" ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಕೆ.ಟಿ.ಚೆಲುವೇಗೌಡ ಹಾಗೂ ಅನೇಕ ಮುಖಂಡರು ಒತ್ತಾಯಿಸಿದ್ದಾರೆ.

ಈ ಕುರಿತು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಒಂದು ವೇಳೆ ಜಿ.ಟಿ.ದೇವೇಗೌಡ ಹಾಗೂ ಸಂದೇಶ್ ನಾಗರಾಜ್ ಅವರನ್ನು ಉಚ್ಛಾಟಿಸದೇ ಹೋದರೆ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆ" ಎಂದರು.
ಇನ್ನು "ಮೇಯರ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜಿ.ಟಿ.ದೇವೇಗೌಡ ಅವರು ಜೊತೆಯಾಗಿದ್ದಾರೆ. ಕೂಡಲೇ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕು" ಎಂದು ಹೇಳಿದ್ದಾರೆ.