ಗುವಾಹಟಿ, ಮಾ.04 (DaijiworldNews/HR): "ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂನಲ್ಲಿ 'ಮಹಾಮೈತ್ರಿ ಕೂಟ' ಅಧಿಕಾರಕ್ಕೆ ಬಂದಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಕಲ್ಪಿಸಲಾಗುವುದು" ಎಂದು ಕಾಂಗ್ರೆಸ್ ಪಕ್ಷ ಭರವಸೆ ನೀಡಿದೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್, "ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿಕೂಟ ಮಹಿಳೆಯರು ಮತ್ತು ಯುವ ಸಮೂಹದ ಬಲವರ್ಧನೆಗೆ ಆದ್ಯತೆ ನೀಡುತ್ತಿದ್ದು, ಅಸ್ಸಾಂನಲ್ಲಿ ಮೈತ್ರಿಕೂಟ ಸರ್ಕಾರ ರಚನೆಯಾದರೆ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡಲಾಗುವುದು" ಎಂದರು.
ಇನ್ನು "ಅಸ್ಸಾಂನ ಯುವಕರು ಮತ್ತು ಮಹಿಳೆಯರು ದೇಣಿಗೆ ಬಯಸುವುದಿಲ್ಲ. ಅವರು ಉದ್ಯೋಗಾವಕಾಶಗಳನ್ನು ಬಯಸುತ್ತಿದ್ದು, ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಲು ಇಷ್ಟಪಡುತ್ತಾರೆ" ಎಂದು ಹೇಳಿದ್ದಾರೆ.