ಮುಂಬೈ, ಮಾ.13 (DaijiworldNews/HR): "ಮರಾಠಿ ಭಾಷಿಕರನ್ನು ಬೆಳಗಾವಿಯಲ್ಲಿ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದ್ದು, ಸದ್ಯದ ಸಮಸ್ಯೆಯನ್ನು ಪರಿಹರಿಸಲು, ಅವರಿಗೆ ಬೆಂಬಲ ಸೂಚಿಸಲು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಮಹಾರಾಷ್ಟ್ರದ ಸರ್ವಪಕ್ಷಗಳ ನಿಯೋಗವನ್ನು ಬೆಳಗಾವಿಗೆ ಕರೆದೊಯ್ಯಬೇಕು" ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಳೆದ ಎಂಟು ದಿನಗಳಲ್ಲಿ ಬೆಳಗಾವಿಯಲ್ಲಿರುವ ಶಿವಸೇನೆ ಮುಖಂಡರು ಮತ್ತು ಪಕ್ಷದ ಕಚೇರಿಯ ಮೇಲೆ ಕನ್ನಡ ಪರ ಸಂಘಟನೆಗಳಿಂದ ಹಲ್ಲೆ ನಡೆಸಿದ ಉದಾಹರಣೆಗಳಿದ್ದು, ಬೆಳಗಾವಿ ಭಾರತದ ಭಾಗವಾಗಿದೆ ಮತ್ತು ಮಹಾರಾಷ್ಟ್ರ-ಕರ್ನಾಟಕದ ನಡುವೆ ಭಾಷಾ ವಿವಾದವಿದ್ದು, ಇದನ್ನು ಹೆಚ್ಚು ವಿಸ್ತರಿಸಬಾರದು ಮತ್ತು ಇದು ಕರ್ನಾಟಕ ಸರ್ಕಾರದ ಜವಾಬ್ದಾರಿ ಕೂಡ ಆಗಿದೆ" ಎಂದರು.
ಇನ್ನು ಬೆಳಗಾವಿಯಲ್ಲಿನ ಪರಿಸ್ಥಿತಿಗೆ ಕೇಂದ್ರ ಸರ್ಕಾರವನ್ನು ಎಂದಿರುವ ರಾವತ್, "ಪಶ್ಚಿಮ ಬಂಗಾಳ ಮತ್ತು ನಾನು ಚುನಾವಣೆಗೆ ಸ್ಪರ್ಧಿಸುತ್ತಿರುವ ಸ್ಥಳಗಳಲ್ಲಿನ ಹಿಂಸಾಚಾರ ಮಾತ್ರ ಬಿಜೆಪಿಗೆ ಕಾಣುತ್ತದೆ. ಆದರೆ ಬೆಳಗಾವಿಯಲ್ಲಿನ ಪರಿಸ್ಥಿತಿಗೆ ಮಾತ್ರ ಕಣ್ಮುಚ್ಚಿ ಕೂರುತ್ತಾರೆ. ಮಹಾರಾಷ್ಟ್ರ ಸರ್ಕಾರವು ದೃಢ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ" ಎಂದು ಹೇಳಿದ್ದಾರೆ.