ಬೆಳಗಾವಿ, ಮಾ.13 (DaijiworldNews/HR): "ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸಬೇಕು" ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೊಲ್ಹಾಪುರದಲ್ಲಿ ಶಿವಸೇನಾದ ಕೆಲವು ಕಾರ್ಯಕರ್ತರ ಪುಂಡಾಟಿಕೆ ಮಿತಿ ಮೀರಿದ್ದು, ರಾಜ್ಯದ ಬಸ್ಗಳ ಮೇಲೆ ಮಸಿ ಬಳಿದಿದ್ದಾರೆ. ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ. ಇದು ಖಂಡನೀಯವಾಗಿದೆ" ಎಂದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅನೇಕ ಪಕ್ಷಗಳ ಜೊತೆ ಸೇರಿ ಸರ್ಕಾರ ನಡೆಸುತ್ತಿದ್ದಾರೆ. ಮಿತ್ರ ಪಕ್ಷದವರು ಅವರಿಗೆ ಸಹಕಾರ ಕೊಡುತ್ತಿಲ್ಲ. ಪರಿಣಾಮ, ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಅವರು ಅಲ್ಲಿನ ಜನರ ಗಮನ ಬೇರೆಡೆ ಸೆಳೆಯಲು ಗಡಿ ವಿಷಯ ತೆಗೆಯುತ್ತಿದ್ದಾರೆ" ಎಂದಿದ್ದಾರೆ.
ಇನ್ನು "ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ಸಮಸ್ಯೆ ಉಂಟು ಮಾಡಿದರೆ ಪ್ರಧಾನಿ ಮೋದಿಗೆ ವಿಚಾರ ತಿಳಿಸಬೇಕಾಗುತ್ತದೆ" ಎಂದು ಹೇಳಿದ್ದಾರೆ.