ಬೆಂಗಳೂರು, ಮಾ.13 (DaijiworldNews/HR): ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದ್ದು, ಈ ಪ್ರಕರಣ ಮತ್ತೊಂದು ಹೊಸ ತಿರುವು ಪಡೆದುಕೊಂಡಿದೆ. ಸಿಡಿಯಲ್ಲಿದ್ದ ಯುವತಿ ಹೇಳಿಕೆ ಬಿಡುಗಡೆ ಮಾಡಿ ತಮಗೆ ರಕ್ಷಣೆ ನೀಡುವಂತೆ ಗೃಹಸಚಿವರಿಗೆ ಮನವಿ ಮಾಡಿದ್ದಾರೆ.
"ವಿಡಿಯೋವನ್ನು ಹೇಗೆ ಮಾಡಿದರು ಎನ್ನುವುದು ನನಗೆ ತಿಳಿದಿಲ್ಲ, ನನ್ನ ಮಾನ ಮರ್ಯಾದೆ ಹರಾಜಾಗಿದೆ. ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ನನ್ನ ಅಪ್ಪ-ಅಮ್ಮ ಕೂಡ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಮ್ಮ ಹಿಂದೆ ಯಾರೂ ಇಲ್ಲ. ಯಾವ ರಾಜಕೀಯದವರು ಇಲ್ಲ" ಎಂದು ಆಕೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಕೆಲಸ ಕೊಡಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು. ಈಗ ಅವರೇ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ ಎಂದು ಯುವತಿ ಹೇಳಿದ್ದು, ರಕ್ಷಣೆಗಾಗಿ ಗೃಹಸಚಿವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.