ಬೆಂಗಳೂರು, ಮಾ. 14 (DaijiworldNews/HR): ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಉತ್ತಿರ್ಣ ಮಾಡುವ ಮತ್ತು ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಕುರಿತು ಯಾವುದೇ ಘೋಷಣೆ ಮಾಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುಎರಿತು ಮಾಹಿತಿ ನೀಡಿರುವ ಅವರು, "1 ರಿಂದ 6ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ ಮತ್ತು ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಪಾಸ್ ಮಾಡಲಾಗುವುದು ಎಂಬುದು ಸುಳ್ಳುಸುದ್ದಿಯಾಗಿದೆ" ಎಂದರು.
ಇನ್ನು "ಸರ್ಕಾರಿ ಶಾಲೆಗಳಲ್ಲಿಒಂದರಿಂದ ಐದನೇ ತರಗತಿಯ ಸರ್ಕಾರಿ ಶಾಲೆ ಮಕ್ಕಳಿಗೆ ಆಕಾಶವಾಣಿಯಲ್ಲಿ ಕಲಿಯೋಣ ನಲಿಯೋಣ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗುತ್ತಿದ್ದು, ಶಿಕ್ಷಕರು ವಿದ್ಯಾರ್ಥಿಗಳ ಕಲಿಕೆಯ ಪ್ರಗತಿಯನ್ನು ಸ್ಥಳೀಯ ಸಂಪನ್ಮೂಲಗಳ ನೆರವಿನೊಂದಿಗೆ ಪರಾಮರ್ಶೆ ಮಾಡುತ್ತಿದ್ದು, ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿಲ್ಲ. ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಪಾಸ್ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ" ಎಂದು ತಿಳಿಸಿದ್ದಾರೆ.