ಬೆಂಗಳೂರು, ಮಾ. 14 (DaijiworldNews/HR): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ವಿಡಿಯೋ ಬಿಡುಗಡೆ ಮಾಡಿದ್ದ ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಶನಿವಾರ ದೂರು ದಾಖಲಿಸಿದ ಬೆನ್ನಲ್ಲೇ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದ್ದು, ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಳು ಎನ್ನಲಾಗಿದೆ.
ಇನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಯುವತಿ ವಾಸವಾಗಿದ್ದ ಮನೆ ಹಾಗೂ ಆಕೆಯ ಸ್ನೇಹಿತರಿಗೂ ಪೊಲೀಸರು ನೋಟಿಸ್ ನೀಡಿದ್ದಾರೆ.