ಬೆಂಗಳೂರು, ಮಾ.14 (DaijiworldNews/PY): ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮಾ.15ರ ಸೋಮವಾರ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸೋಮವಾರ ಸಂಜೆ 5 ಗಂಟೆಗೆ ಸಿಎಂ ಬಿಎಸ್ವೈ ಅವರು ವಿಧಾನಸೌಧದಲ್ಲಿ ಅಧಿಕಾರಿಗಳು ಹಾಗೂ ತಜ್ಞರ ಸಭೆ ಕರೆದಿದ್ದು, ಚರ್ಚೆ ನಡೆಸಲಿದ್ದಾರೆ.
ನೆರೆ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ರಾಜ್ಯದಲ್ಲಿ ಕೊರೊನಾದ ಎರಡನೇ ಅಲೆ ಬಾರದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಪರೀಕ್ಷೆಯ ಗುರಿಯನ್ನು ಹೆಚ್ಚಳ ಮಾಡಲಾಗಿದೆ.
ಜನಸಂದಣಿಯನ್ನು ನಿಯಂತ್ರಿಸಲು ವಿವಾಹ ಸೇರಿದಂತೆ ಇನ್ನಿತರ ಆಚರಣೆ, ರಾಜಕೀಯ ಸಭೆ-ಸಮಾರಂಭ ಹಾಗೂ ಧಾರ್ಮಿಕ ಆಚರಣೆಗಳಿಗೆ ಹೊಸ ನಿಯಮಗಳನ್ನು ಜಾರಿ ಮಾಡಲಾಗಿದೆ.