ಚೆನ್ನೈ, ಮಾ.19 (DaijiworldNews/PY): "ರಾಜ್ಯದಲ್ಲಿ ಡಿಎಂಕೆ ಪಕ್ಷ ಅಧಿಕಾರಕ್ಕೆ ಬಂದರೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯನ್ನು ಸಂಪೂರ್ಣ ರದ್ದು ಮಾಡುತ್ತೇವೆ. ಅದು ಸಾಧ್ಯವಾಗದಿದ್ದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಪಾಸ್ ಆಗಲು ನಕಲು ಮಾಡಲು ಅವಕಾಶ ಮಾಡುತ್ತೇವೆ" ಎಂದು ಡಿಎಂಕೆ ಪಕ್ಷದ ಮಾಜಿ ಸಚಿವ ಕೆ.ಎನ್.ನೆಹರೂ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ತಿರುಚ್ಚಿಗೆ ಆಗಮಿಸಿದ ವೇಳೆ ಸಭೆಯಲ್ಲಿ ಮಾತನಾಡಿದ ಅವರು, "ತಮಿಳುನಾಡಿವ ವಿದ್ಯಾರ್ಥಿಗಳು ಮಾತ್ರ ನಿಸ್ವಾರ್ಥವಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ನಾವು ಮಾತ್ರ ಏಕೆ ಈ ರೀತಿ ಮಾಡಬೇಕು?" ಎಂದು ಕೇಳಿದ್ದಾರೆ.
"ರಾಜ್ಯಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದರೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸುತ್ತೇವೆ. ಇದು ಸಾಧ್ಯವಾಗದೇ ಇದ್ದಲ್ಲಿ ಪರೀಕ್ಷೆಯಲ್ಲಿ ಪಾಸ್ ಆಗಲು ನಕಲು ಮಾಡಲು ಅವಕಾಶ ಕಲ್ಪಿಸುತ್ತೇವೆ" ಎಂದಿದ್ದಾರೆ.