ಬೆಳಗಾವಿ, ಮಾ. 20(DaijiworldNews/HR) : ಕರ್ನಾಟಕ ಸರ್ಕಾರ ಬೆಳಗಾವಿ ಗಡಿ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ನೆಲ ಮತ್ತು ಜಲವನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಣೆ ಮಾಡುತ್ತೇವೆ" ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಮ್ಮ ಬಿಜೆಪಿ ಸರ್ಕಾರ ರಕ್ಷಣೆ ಮಾಡುತ್ತದೆ. ಶಿವಸೇನೆ ಪುಂಡಾಟಿಕೆ ನಿಲ್ಲಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದ್ದು, ಶಿವಸೇನೆ ಪುಂಡಾಟಿಕೆ ನಿರಂತರವಾಗಿ ನಡೆಯುತ್ತಿದೆ. ಕಠಿಣ ಕ್ರಮ ಜರುಗಿಸಿ ನಾವು ನಿಲ್ಲಿಸಬೇಕಿದೆ" ಎಂದರು.
"ಪೊಲೀಸ್ ಅಧಿಕಾರಿ, ಜಿಲ್ಲಾಧಿಕಾರಿಗೆ ಇಂಥವರನ್ನು ಮಟ್ಟ ಹಾಕಲು ನಾನು ಸೂಚನೆ ಕೊಡುತ್ತೇನೆ. ಬಹಳಷ್ಟು ಜನ ಮರಾಠಿಗರು ಇದ್ದಾರೆ ಅವರು ಶಾಂತಿ ಬಯಸುತ್ತಿದ್ದು, ಶಿವಸೇನೆ ಕಾರ್ಯಕರ್ತರಿಗೆ ಸರ್ಕಾರ ಸರಿಯಾದ ಪಾಠ ಕಲಿಸಲಿದ್ದು, ಶಿವಸೇನೆಯವರಿಗೆ ಎಬಿಸಿಡಿಯಿಂದ ಹಿಡಿದು ಕನ್ನಡದ ಅಕ್ಷರ ಮಾಲೆಗಳನ್ನು ಕಲಿಸುತ್ತೇವೆ" ಎಂದಿದ್ದಾರೆ.