ಉದಯಪುರ, ಮಾ. 24 (DaijiworldNews/HR): ಮಾನಸಿಕ ಅಸ್ವಸ್ಥೆಯಾಗಿದ್ದ 23 ವರ್ಷದ ಯುವತಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಉದಯಪುರದ ಗೊಗುಂಡದಲ್ಲಿರುವ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸಂಜೆ ಯುವತಿಯ ಕುಟುಂಬ ನೀಡಿರುವ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಡಿಯಲ್ಲಿ ಬಂದ ಮೂವರು ಯುವತಿಯನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಭಾನುವಾರ ಸಂಜೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
ಇನ್ನು ಯುವತಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದ್ದು, ಅಪರಾಧಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.