ನವದೆಹಲಿ,ಮಾ 25 (DaijiworldNews/MS): ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ನಾಳೆಗೆ 4 ತಿಂಗಳಾಗುವ ಹಿನ್ನಲೆಯಲ್ಲಿ ಹಾಗೂ ಸರ್ಕಾರದ ಭೂ ಸುಧಾರಣಾ ಮಸೂದೆಗಳನ್ನು ವಾಪಾಸ್ ಪಡೆಯುವಂತೆ ಒತ್ತಾಯಿಸಿ ಮಾರ್ಚ್ 26ರ ನಾಳೆ ಭಾರತ್ ಬಂದ್ಗೆ ಕರೆ ನೀಡಲಾಗಿದೆ.
ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್ಕೆಎಂ) ದೇಶದ ನಾಗರಿಕರಿಗೆ "ತಮ್ಮ ಅನ್ನದಾತರನ್ನು ಗೌರವಿಸಿ" ಮುಷ್ಕರವನ್ನು 'ಸಂಪೂರ್ಣ ಯಶಸ್ಸು' ಮಾಡುವಂತೆ ಮನವಿ ಮಾಡಿದೆ. ಭಾರತ್ ಬಂದ್ ಅನ್ನು ಯಶಸ್ವಿಗೊಳಿಸಲು ಮತ್ತು ಅವರ 'ಅನ್ನದಾತರನ್ನು ಗೌರವಿಸುವಂತೆ ನಾವು ದೇಶದ ಜನರಿಗೆ ಮನವಿ ಮಾಡುತ್ತೇವೆ" ಎಂದು ರೈತ ಮುಖಂಡ ದರ್ಶನ್ ಪಾಲ್ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.ಇನ್ನು ಕರ್ನಾಟಕದಲ್ಲೂ ಭಾರತ್ ಬಂದ್ ಯಶಸ್ವಿಗೊಳಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸಂಯುಕ್ತ ಹೋರಾಟ- ಕರ್ನಾಟಕ ಸಮಿತಿ ವತಿಯಿಂದ ಮನವಿ ಮಾಡಲಾಗಿದೆ.
ರಾಜ್ಯದ ಎಲ್ಲಾ ನಾಗರೀಕರು ಬಂದ್ಗೆ ಬೆಂಬಲ ಸೂಚಿಸಬೇಕು. ಜೊತೆಗೆ ವ್ಯಾಪಾರಸ್ಥರು, ಕಾರ್ಮಿಕರು, ಆಟೋ ಚಾಲಕರು, ಸೇರಿದಂತೆ ಎಲ್ಲ ಉದ್ದಿಮೆಗಳು ಸ್ವಯಂಪ್ರೇರಿತರಾಗಿ ಬಂದ್ ಗೆ ಬೆಂಬಲ ಸೂಚಿಸಬೇಕು. ಬೆಂಬಲ ಸೂಚಿಸುವ ಮೂಲಕ ಅನ್ನದಾರಿಗೆ ಒತ್ತಾಸೆಯಾಗಿ ನಿಲ್ಲಬೇಕು. ಅನ್ನದಾತನನ್ನು ಉಳಿಸಿಕೊಳ್ಳಬೇಕು, ಎಲ್ಲ ಕನ್ನಡಪರ ಸಂಘಟನೆಗಳು ಕೂಡ ಬಂದ್ಗೆ ಬೆಂಬಲ ಸೂಚಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಿಸಿದೆ.