ರಾಮೇಶ್ವರಂ, ಮಾ.25 (DaijiworldNews/HR): ಅಕ್ರಮವಾಗಿ ಶ್ರೀಲಂಕಾಗೆ ಸೇರಿದ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ 20 ಜನ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿ, 2 ದೋಣಿಗಳನ್ನು ಕೂಡ ವಶಪಡಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಶ್ರೀಲಂಕಾ ಪಡೆಗಳು ರಾಮೇಶ್ವರಂ ಮತ್ತು ತಂಗಚಿಮಡಂ ಮೂಲದ ಮೀನುಗಾರರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದು, ವಿಚಾರಣೆ ಪೂರ್ಣಗೊಂಡ ಬಳಿಕ ಶ್ರೀಲಂಕಾ ಮೀನುಗಾರಿಕಾ ಪ್ರಾಧಿಕಾರದ ವಶಕ್ಕೆ ನೀಡಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಮೀನುಗಾರರನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಮೀನುಗಾರರ ಸಂಘದ ಪ್ರತಿನಿಧಿಗಳು ಕೇಂದ್ರ ಹಾಗೂ ತಮಿಳುನಾಡು ಸರ್ಕಾರವನ್ನು ಆಗ್ರಹಿಸಿದ್ದಾರೆ.