ಶ್ರೀನಗರ, ಮಾ.25 (DaijiworldNews/PY): "ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಪಲ್ಸ್ ಆಫ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಜಾರಿ ನಿರ್ದೇಶನಾಲಯದಲ್ಲಿ ಗುರುವಾರ ವಿಚಾರಣೆಗೆ ಹಾಜರಾದರು" ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೆಹಬೂಬಾ ಮುಫ್ತಿ ಅವರು ಬೆಳಗ್ಗೆ 11 ಗಂಟೆಗೆ ರಾಜ್ಬಾಗ್ನ ಜಾರಿ ನಿರ್ದೇಶನಾಲಯ ಕಚೇರಿ ತಲುಪಿದ್ದು, ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಇದಕ್ಕೂ ಮುನ್ನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ದೆಹಲಿಗೆ ಬರಲು ಮುಫ್ತಿ ಅವರಿಗೆ ಅವರಿಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ, ದೆಹಲಿಯ ಬದಲು ಶ್ರೀನಗರದ ಕಚೇರಿಯಲ್ಲಿ ವಿಚಾರಣೆ ನಡೆಸಬೇಕು ಎಂದು ಮುಫ್ತಿ ಅವರು ಮನವಿ ಸಲ್ಲಿಸಿದ್ದರು. ಮುಫ್ತಿ ಅವರ ಮನವಿಯನ್ನು ಅಂಗೀಕರಿಸಿ ಶ್ರೀನಗರದ ಕಚೇರಿಯಲ್ಲಿ ವಿಚಾರಣೆಗೆ ಅವಕಾಶ ನೀಡಲಾಯಿತು.
ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂದು ಮೆಹಬೂಬಾ ಮುಫ್ತಿ ಅವರಿಗೆ ಇಡಿ ಕಚೇರಿ ನೋಟಿಸ್ ಜಾರಿ ಮಾಡಿತ್ತು.