ಬೆಂಗಳೂರು, ಮಾ. 25 (DaijiworldNews/SM): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕುರಿತಂತೆ ಕ್ಷಣಕ್ಕೊಂದು ಕುತೂಹಲಕಾರಿ ಸಂಗತಿಗಳು ಹೊರ ಬೀಳುತ್ತಿವೆ. ಈ ನಡುವೆ ಸಂತ್ರಸ್ತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಬಳಿ ರಕ್ಷಣೆ ಕೋರಿದ್ದಾಳೆ ಎನ್ನಲಾಗಿದ್ದು, ಈ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅವರಿಂದಲೇ ಮಾಹಿತಿ ಪಡೆಯಬೇಕಾಗಿದೆ. ಎಸ್ಐಟಿ ತನಿಖೆ ನಡೆಯುತ್ತಿರುವಾಗ ಹಲವು ತಿರುವುಗಳು ಎದುರಾಗುತ್ತವೆ ಎಂದಿರುವ ಗೃಹ ಸಚಿವರು, ಈ ಸಂದರ್ಭದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತವೆ. ಆದರೆ ಎಸ್ಐಟಿ ತನಿಖೆ ಯಾರ ಪರವಾಗಿಯೂ ಇಲ್ಲ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.