ನವದೆಹಲಿ, ಮಾ. 26(DaijiworldNews/HR): ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಬಳಿಕ ಮೊದಲ ಬಾರಿಗೆ ವಿದೇಶ ಪ್ರಯಾಣ ಮಾಡುತ್ತಿದ್ದು, ಇಂದು ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದಾರೆ.

ಇಂದು ಬೆಳಗ್ಗೆ ದೆಹಲಿಯಲ್ಲಿ ವಿಮಾನ ಪ್ರಯಾಣ ಆರಂಭದಲ್ಲಿ ಢಾಕಾಕ್ಕೆ ಪ್ರಯಾಣಿಸುತ್ತಿದ್ದು, ಪ್ರಧಾನಿ ಮೋದಿ ಬಾಂಗ್ಲಾದೇಶದ ರಾಷ್ಟ್ರೀಯ ಹುತಾತ್ಮ ಸ್ಮಾರಕ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕೆ ಅಬ್ದುಲ್ ಮೊಮೆನ್ ಅವರನ್ನು ಅಪರಾಹ್ನ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಕೊರೊನಾದ ಬಳಿಕ ಪ್ರಧಾನಿಯವರ ಮೊದಲ ವಿದೇಶ ಪ್ರಯಾಣ ಇದಾಗಿದ್ದು, ಇಂದು ಬೆಳಗ್ಗೆ ಬಾಂಗ್ಲಾದೇಶ ತಲುಪಿದ್ದಾರೆ.
ಮಾರ್ಚ್ 17 ರಿಂದ 27ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯನಡೆಯಲಿದೆ.