ಪುದುಚೇರಿ, ಮಾ.26 (DaijiworldNews/PY): ಪುದುಚೇರಿ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಹಣಕಾಸು ಸಚಿವೆ ನಿರ್ಲಲಾ ಸೀತಾರಾಮನ್ ಸೇರಿದಂತೆ ಕೇಂದ್ರ ಸಚಿವರುಗಳಾದ ಗಿರಿರಾಜ್ ಸಿಂಗ್ ಹಾಗೂ ಅರ್ಜುನ್ ರಾಮ್ ಮೇಘಾವಲ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ನಿರ್ಮಲಾ ಸೀತಾರಾಮನ್, "ಸಾರ್ವಜನಿಕರ ಸಲಹೆಗಳನ್ನು ಪಡೆದುಕೊಂಡು ಬಿಜೆಪಿ ನ್ಯಾಯಯುತವಾದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ನಾವು ಎಸಿ ರೂಂನಲ್ಲಿ ಕುಳಿತುಕೊಂಡು ಈ ಪ್ರಣಾಳಿಕೆಯನ್ನು ಮಾಡಿಲ್ಲ. ಪ್ರಧಾನಿ ಮೋದಿ ಅವರು ನಾವು ನೀಡಿದ ಭರವಸೆಗಳನ್ನು ಜನರಿಗೆ ನೀಡುತ್ತಾ ಬಂದಿದ್ದಾರೆ" ಎಂದು ತಿಳಿಸಿದ್ದಾರೆ.