ಬೆಂಗಳೂರು, ಮಾ. 26(DaijiworldNews/HR): ಕರ್ನಾಟಕದ ಎರಡು ವಿಧಾನಸಭಾ ಹಾಗೂ ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ನಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವಂತ ಉಪ ಚುನಾವಣೆಗೆ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ನಿಂದ ಹಾಗೂ ಬಿಜೆಪಿಯಿಂದ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಈ ಕುರಿತು ಎಐಸಿಸಿ ಜನರಲ್ ಸೆಕ್ರೇಟರಿ ಮುಖಲ್ ವಾಷ್ನಿಕ್ ಟಿಕೆಟ್ ಘೋಷಣೆ ಮಾಡಿರುವ ಬಗ್ಗೆ ಪ್ರಕಟಿಸಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕೆ ಇಳಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಇನ್ನು ಬೆಳಗಾವಿ ಲೋಕಸಭೆ ಬೈಎಲೆಕ್ಷನ್ ಬಿಜೆಪಿ ಅಭ್ಯರ್ಥಿಯಾಗಿ ದಿ.ಸುರೇಶ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರ ಹೆಸರನ್ನು ಬಿಜೆಪಿ ಅಧಿಕೃತವಾಗಿ ಘೋಷಣೆ ಮಾಡುತ್ತಿದ್ದಂತೆ ಅಂಗಡಿ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು ಎನ್ನಲಾಗಿದೆ.