ಮೈಸೂರು, ಮಾ. 26(DaijiworldNews/HR): "ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ದೇಗುಲ ಸಿಬ್ಬಂದಿಗೆ ಶೀಘ್ರದಲ್ಲೇ 6 ನೇ ವೇತನ ಶ್ರೇಣಿ ಜಾರಿಗೊಳಿಸಲಾಗುವುದು" ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇಗುಲ ಸಿಬ್ಬಂದಿಗೆ 6 ನೇ ವೇತನ ಶ್ರೇಣಿ ಜಾರಿಗೆ ಕೆಲವೊಂದು ತೊಡಕಿದ್ದು, ಈಗಾಗಲೇ ಸಮಸ್ಯೆ ಪರಿಹಾರಕ್ಕೆ ಅಂತಿಮ ರೂಪ ನೀಡಿದ್ದು, ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು" ಎಂದರು.
ಇನ್ನು ಅರ್ಚಕರಿಗೆ ಆರೋಗ್ಯ ವಿಮೆ, ಜೀವ ವಿಮೆ ಹಾಗೂ ಪಿಂಚಣಿ ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ಪ್ರಕಟಿಸಲಿದ್ದೇವೆ" ಎಂದು ಹೇಳಿದ್ದಾರೆ.