ನವದೆಹಲಿ, ಮಾ. 26(DaijiworldNews/HR): ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾದ ಎಫ್ಐಆರ್ ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿ ಸುಶಾಂತ್ ಸಹೋದರಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ತಿಳಿದು ಬಂದಿದೆ.

ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಈ ಪ್ರಕರಣದಲ್ಲಿ ಸಲ್ಲಿಸಿದ್ದ ದೂರಿನ ಮೇರೆಗೆ, ಆತನ ಸಹೋದರಿ ಪ್ರಿಯಾಂಕ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಇನ್ನು ಈ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈ ಕೋರ್ಟ್ನಲ್ಲಿ ಪ್ರಿಯಾಂಕ ಅರ್ಜಿ ಸಲ್ಲಿಸಿದ್ದು, ಇದನ್ನು ಹೈ ಕೋರ್ಟ್ ವಜಾಗೊಳಿಸಿ ಆದೇಶಿಸಿತು. ಈ ಆದೇಶವನ್ನು ಪ್ರಿಯಾಂಕ ಸಿಂಗ್ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು.