ಬದಾಮಿ, ಜ 25 (DaijiworldNews/HR): ಬಿಜೆಪಿ ಮತ್ತು ಜೆಡಿಎಸ್ನ ಕೆಲವು ಶಾಸಕರು ನನ್ನ ಸಂಪರ್ಕದಲ್ಲಿದ್ದು, ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಗೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ನ ಕೆಲ ಶಾಸಕರು ನನ್ನ ಸಂಪರ್ಕದಲ್ಲಿದ್ದು, ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಗೊಳ್ಳಲಿದ್ದಾರೆ. ನನ್ನ ಸಂಪರ್ಕದಲ್ಲಿರುವವರ ಹೆಸರು ಹೆಳಲ್ಲ. ಸಮಯ ಬಂದಾಗ ಹೇಳುತ್ತೇನೆ. ನಮ್ಮ ಸಿದ್ಧಾಂತ ಒಪ್ಪಿಕೊಂಡು ಪಕ್ಷಕ್ಕೆ ಬರುವವರಿಗೆ ಸ್ವಾಗತ ಎಂದರು.
ಇನ್ನು ನಮ್ಮ ಜೊತೆ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಸಂಪರ್ಕದಲ್ಲಿದ್ದು ಎಷ್ಟು ಜನ ಎಂಬುದನ್ನು ಮಾತ್ರ ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.